12:03 PM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಭರ್ಜರಿ ರೋಡ್ ಶೋ: ಮಹಾಲಿಂಗೇಶ್ವರನ ದರ್ಶನ

06/05/2023, 19:13

ಪುತ್ತೂರು(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ
ಇಲ್ಲಿನ ಮಹಾಲಿಂಗೇಶ್ವರ ದೇವಳದಿಂದ ಭರ್ಜರಿ ರೋಡ್ ಶೋ ನಡೆಸಿದರು.
ನಿಗದಿತ ಸಮಯಕ್ಕಿಂತ ಸುಮಾರು 2 ತಾಸು ವಿಳಂಬವಾಗಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಎಂಟ್ರಿ ಕೊಟ್ಟರು. ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಉತ್ತರ ಪ್ರದೇಶದ ಮುಖ್ಯಮಂತ್ರಿಯ ಆಗಮನವಾಗುತ್ತಿದ್ದಂತೆ ನೆರೆದ ಭಾರೀ ಜನಸ್ತೋಮ ಘೋಷಣೆಗಳನ್ನು ಕೂಗಿದರು. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಅವರು ಬಿಜೆಪಿ ಅಭ್ಯರ್ಥಿ ಮತ್ತು ಪ್ರಮುಖರ ಜತೆಗೆ ರ್‍ಯಾಲಿಯಲ್ಲಿ ಪಾಲ್ಗೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಪ್ರದೇಶ ‌ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪುತ್ತೂರು ಜನರಿಗೆ ನನ್ನ ನಮಸ್ಕಾರಗಳು ಎಂದು ಮಾತು ಆರಂಭಿಸಿದ ಅವರು, ಪರುಶುರಾಮನ ಸನ್ನಿಧಿಗೆ ಬಂದಷ್ಟು ಖುಷಿ ಆಗಿದೆ. ಬಜರಂಗ ದಳವನ್ನು ನಿಷೇಧ ಮಾಡುವ ಘೋಷಣೆಗೆ ಮತದಾರರು ತಕ್ಕ ಉತ್ತರ ನೀಡಬೇಕು. ಡಬಲ್ ಎಂಜಿನ್ ಸರ್ಕಾರವು ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೇ ರಾಷ್ಟ್ರ ಭಕ್ತರ ಬಜರಂಗ ದಳ ನಿಷೇಧ ಮಾಡುವುದಾಗಿ ಘೋಷಣೆ ಮಾಡುತ್ತಿದೆ. ದೇಶದ್ರೋಹಿಗಳಿಗೆ ಇಂಬು ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಸುರಕ್ಷಿತವಾಗಿದೆ. ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಆಗುತ್ತಿದೆ. ರಾಜ್ಯದಲ್ಲಿ ಬಿಎಸ್ ವೈ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರವು ಉತ್ತಮ ಆಡಳಿತ ನೀಡುತ್ತಿದೆ. ಪಿಎಫ್ ಐ ಬ್ಯಾನ್ ಮಾಡುವ ಮೂಲಕ ದೇಶ ರಕ್ಷಣೆಗೆ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡುತ್ತಿದೆ. ಕಾಂಗ್ರೆಸ್, ಜೆಡಿಎಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಗೆ ಮತ ಹಾಕುವ ಮೂಲಕ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು