10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

16/07/2021, 15:59

ಬೆಂಗಳೂರು (ReporterKarnataka.com)

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.

ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ನೋಂದಣಿ ನಂಬರ್ ಸಿಕ್ಕಿಲ್ಲ. ಹೀಗಾಗಿ ಫಲಿತಾಂಶ ನೋಡುವ ಬಗ್ಗೆ ಗೊಂದಲ ಏರ್ಪಟ್ಟಿದ್ದು, ಇದಕ್ಕೂ ಶಿಕ್ಷಣ ಇಲಾಖೆ ಪರಿಹಾರ ಕಂಡುಕೊಂಡಿದೆ. ಫಲಿತಾಂಶ ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಜನರೇಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ವೆಬ್ ತಾಣದಲ್ಲಿ know your Number ಅಯ್ಕೆ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು.

ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೋಗಲಿದೆ. ಜತೆಗೆ ಆಯಾ ಕಾಲೇಜುಗಳಿಗೆ ಫಲಿತಾಂಶದ ವಿವರ ನೀಡಲಾಗುವುದು. ಫಲಿತಾಂಶದ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಖಚಿತ ಪಡಿಸಿಕೊಂಡು, ಜನರೇಟ್ ಆದ ರಿಜಿಸ್ಟರ್ ನಂಬರ್ ಪರಿಶೀಲಿಸಿ ಜು. 20 ರ ನಂತರ ಫಲಿತಾಂಶ ನೋಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು