3:06 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಕರಾವಳಿಯ ಬ್ಯಾಂಕ್ ಗಳ ವಿಲೀನ ಮಾಡಿ ಪ್ರಧಾನಿ ಜನತೆಗೆ ದ್ರೋಹ ಎಸಗಿದ್ದಾರೆ: ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಕಿಡಿ

07/05/2023, 18:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಯಲ್ಲಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಕರಾವಳಿಯ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
ನಗರದ ಹೊರವಲಯದ ಮೂಲ್ಕಿಯ ಕೊಳ್ನಾಡಿನಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್ಗೆ, ಭ್ರಷ್ಟಾಚಾರ ಬಗ್ಗೆ. ಆದರೆ ಇದು ಯಾವುದರ ಬಗ್ಗೆ ಮಾತನಾಡದ ನೀವು ಜನರ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಿರಿ ಎಂದು ಕಿಡಿಕಾರಿದರು.


ಬೆಲೆಯೇರಿಕೆ ಉರಿಯಲ್ಲಿ ಜನರು ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.
ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಜನರು ಸಂಪೂರ್ಣ ನೆಮ್ಮದಿ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಬಗ್ಗೆ ನೀವು ಮಾತನಾಡುವುದೇ ಇಲ್ಲ. ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಜಿಲ್ಲೆಯಲ್ಲಿನ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಇಲ್ಲಿನ ಜನರಿಗೆ ದ್ರೋಹ ಮಾಡಿದ್ದೀರಿ. ಈ ಬಾರಿ ಕರ್ನಾಟಕದ ಜನರು ಕಾಂಗ್ರೆಸ್ ಸರಕಾರ ತರುವುದಕ್ಕೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರಕಾರದ ಅಧಿಕಾರದ ಅವಧಿಯಲ್ಲಿ ರಾಜೀವ್ ಗಾಂಧಿ ಅವರ ದೂರದರ್ಶಿತ್ವದಿಂದಾಗಿ ರಾಜ್ಯವು ಇಂದು ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದರು.


ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ್ ಬೆಲೆಗಳು ಏರಿಕೆ ಆಗಿವೆ. ಶಿಕ್ಷಣ, ಉದ್ಯೋಗಕ್ಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಕೋಟಿ ಕೋಟಿ ಮಾರಾಟ ಆಗುತ್ತಿದೆ. ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಸಂಪೂರ್ಣ ಈಡೇರಿಸಲಿದೆ. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಒಂದೇ ವರ್ಷದಲ್ಲಿ ಭರ್ತಿ ಮಾಡುತ್ತೇವೆ. ಮೀನುಗಾರರಿಗೆ ಡಿಸೇಲ್ ಸಹಾಯಧನ, ನಾರಾಯಣ ಗುರು ನಿಗಮಕ್ಕೆ ಅನುದಾನ, ಐಟಿ, ಗಾರ್ಮೆಂಟ್ ಕ್ಷೇತ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರವು ಒತ್ತು ನೀಡಲಿದೆ ಎಂದರು.



ಕರಾವಳಿಗೆ ಮೊದಲ ಬಾರಿ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತುಳುನಾಡಿನ ಸಮಸ್ತ ಜನತೆಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು. ಕರಾವಳಿ ದೈವದ ನಾಡು, ಬಪ್ಪನಾಡು ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಾನವು ಸಂಪತ್ತು, ಶಾಂತಿಯ ತಾಣ ಎಂದು ಬಣ್ಣಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಮಾಜಿ ಸಚಿವ ಜನಾರ್ದನ ಪೂಜಾರಿ, ಅಜಯ್ ಕುಮಾರ್, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು