1:02 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಹೊರಗಿನಿಂದ ಬಂದ ಪ್ರಚಾರಕರಿಗೆ ಕ್ಷೇತ್ರ ಬಿಡಲು ಸೂಚನೆ

08/05/2023, 21:57

ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಸೋಮಾರ ಸಂಜೆ 5 ಗಂಟೆಗೆ ಅಂತ್ಯಗೊಂಡಿದೆ.
ಜಿಲ್ಲೆಯ 8 ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಕೊನೆಯ ಹಂತದ ಬಹಿರಂಗ ಪ್ರಚಾರ ನಡೆಸಿದವು. ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೋ ಅವರ ಪಾದಯಾತ್ರೆ ಬೃಹತ್ ಜನಸ್ತೋಮದ ನಡುವೆ ನಗರದ ಮಿನಿ ವಿಧಾನ ಸೌಧದಿಂದ ನವಭಾರತ ಸರ್ಕಲ್ ವರೆಗೆ ನಡೆಯಿತು. ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಪ್ರಚಾರಾರ್ಥ ಮೆರವಣಿಗೆ ಹಾಗೂ ಬೃಹತ್ ಸಮಾವೇಶ ಬಿ.ಸಿ. ರೋಡ್ ನಲ್ಲಿ ನಡೆಯಿತು.
ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ ಅಥವಾ ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯøರ್ಥಿಗಳು ತಮ್ಮ ಚುನಾವಣಾ ಜಾಹೀರಾತನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ ನಿಗಧಿತ ಅನುಬಂಧ-ಸಿ ಅರ್ಜಿ ನಮೂನೆಯೊಂದಿಗೆ ಎರಡು ಸ್ವಯಂ ದೃಢೀಕೃತ ಜಾಹೀರಾತು ಪ್ರತಿಗಳನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ.
ಇನ್ನು ಚುನಾವಣಾ ಬಹಿರಂಗ ಪ್ರಚಾರ ಮೇ 8 ರಂದು ಸಂಜೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜಿಲ್ಲಾ ಎಂ.ಸಿ.ಎಂ.ಸಿ. ಸಮಿತಿಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ 8 ರ ಸಂಜೆ 5 ಗಂಟೆ ವರೆಗಿನ ಅವಧಿಗೆ ಮಾತ್ರ ಸುದ್ದಿ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಜಾಹೀರಾತು ಪ್ರಚಾರ ಪಡಿಸಲು ಸಮಿತಿಯಿಂದ ಪೂರ್ವಾನುಮತಿ ನೀಡಲಾಗುತ್ತದೆ.
ಇನ್ನು ಪತ್ರಿಕೆಗಳು ಮೇ 9 ಮತ್ತು 10ರಂದು ಯಾವುದೇ ಚುನಾವಣಾ ಜಾಹಿರಾತುಗಳನ್ನು ಪ್ರಕಟಿಸುವ ಮುನ್ನ ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಜಾಹೀರಾತು ಪ್ರಕಟಿಸಬೇಕು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ.
ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರಗಳ ಮೇಲೆ ಚುನಾವಣ ಆಯೋಗ ತೀವ್ರ ನಿಗಾ ವಹಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು