3:08 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಡಿಜಿಟಲ್ ವಾಚ್ ಸಹಿತ ಇ-ಗ್ಯಾಜೆಟ್‍ ಕೊಂಡೊಯ್ಯುವುದು ನಿಷೇಧ

09/05/2023, 10:32

ಮಂಗಳೂರು(reporterkarnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‍ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.
ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‍ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರಾತಿನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು