11:28 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಂಟ್ವಾಳ ಕ್ಷೇತ್ರ: 1572 ಸಿಬ್ಬಂದಿ, 25 ಬಸ್, 26 ಮ್ಯಾಕ್ಸಿ ಕ್ಯಾಬ್, 22 ಮಿನಿ ಬಸ್, 20 ಜೀಪ್ ಮತಗಟ್ಟೆಯತ್ತ

09/05/2023, 18:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮಂಗಳವಾರ ಬಿ.ಸಿ.ರೋಡಿನ ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಚುನಾವಣಾ ಸಿಬ್ಬಂದಿಗಳು ಮತಗಟ್ಟೆಯತ್ತ ಪಯಣಿಸಿದರು.


ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು, ಪ್ರತೀ ಮತಗಟ್ಟೆಗೆ 4 ಮತಗಟ್ಟೆ ಅಧಿಕಾರಿಗಳು, 1 ಗ್ರೂಪ್ ಡಿ, 1 ಪೊಲೀಸ್ ಹಾಗೂ 1200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳಿಗೆ 1 ಹೆಚ್ಚವರಿ ಅಧಿಕಾರಿಗಳನ್ನು ನೇಮಕಾತಿ ಮಾಡಲಾಗಿತ್ತು. 25 ಸೆಕ್ಟರ್ ಅಧಿಕಾರಿಗಳು ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು. ಗ್ರೂಪ್ ಡಿ ಮತ್ತು ಪೊಲೀಸ್ ಸಿಬ್ಬಂದಿಗಳನ್ನೂ ಒಳಗೊಂಡಂತೆ ಸುಮಾರು 1572 ಮಂದಿ ಚುನಾವಣಾ ಕರ್ತವ್ಯಕ್ಕಾಗಿ 25 ಬಸ್ ಗಳು, 26 ಮ್ಯಾಕ್ಸಿ ಕ್ಯಾಬ್, 22 ಮಿನಿ ಬಸ್, 20 ಜೀಪುಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು. ಮತಗಟ್ಟೆ ಅಧಿಕಾರಿಗಳು ಮತ್ತು ಕರ್ತವ್ಯನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾ ವೀಕ್ಷಕರಾದ ದೀಪಾಂಕರ್ ಸಿನ್ಹಾ, ಚುನಾವಣಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಚುನಾವಣಾಧಿಕಾರಿ ಎಸ್ ಬಿ ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ ಎಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ, ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯಕ್ ಎನ್ ಎಮ್, ವಿಜಯ್ ವಿಕ್ರಮ್, ದಿವಾಕರ ಮುಗುಲ್ಯ ಮಸ್ಟರಿಂಗ್ ಮೇಲುಸ್ತುವಾರಿ ವಹಿಸಿದ್ದರು. ವಿವಿಧ ಇಲಾಖೆಗಳ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಉಪಸ್ಥಿತರಿದ್ದರು. ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ 156 ಮತಗಟ್ಟೆಗಳನ್ನು ವೆಬ್ ಕಾಸ್ಟಿಂಗ್ ಗಾಗಿ ಆಯ್ಕೆ ಮಾಡಲಾಗಿರುತ್ತದೆ. 62 ಮತಗಟ್ಟೆಗಳಿಗೆ ಅರೆ ಸೇನಾ ಪಡೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 5 ಮತಗಟ್ಟೆಗಳನ್ನು ‘ಸಖಿ’ ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಹಾಗೆಯೇ 1 ಯಕ್ಷಗಾನ, 2 ಕಂಬಳ, 1 ನೀಲತರಂಗ, 1 ಪರಂಪರೆ, 1 ಗೋಗ್ರೀನ್, 1 ವಿಕಲಚೇತನ ಮತಗಟ್ಟೆಗಳಾಗಿ SVEEP ಯೋಜನೆಯಡಿ ಗುರುತಿಸಲಾಗಿದ್ದು, ಸದರಿ ಮತಗಟ್ಟೆಗಳನ್ನು ಆಯಾ ವಿಷಯಕ್ಕೆ ಅನುಗುಣವಾಗಿ ಈಗಾಗಲೇ ವಿನ್ಯಾಸಗೊಳಿಸಲಾಗಿದೆ. ಪೂರ್ವಾಹ್ನ 7.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಇರುತ್ತದೆ

ಇತ್ತೀಚಿನ ಸುದ್ದಿ

ಜಾಹೀರಾತು