ಇತ್ತೀಚಿನ ಸುದ್ದಿ
ಮೂಡುಶೆಡ್ಡೆ ಅಹಿತಕರ ಘಟನೆ: ಕಾವೂರು, ಸುರತ್ಕಲ್ ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
11/05/2023, 13:36

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾವೂರು ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೇ 10ರ ರಾತ್ರಿ 9 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಬುಧವಾರ ಚುನಾವಣೆ ಮುಗಿದ ಬಳಿಕ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಸಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವ ಕಾರಣ ಸೆಕ್ಷನ್ 144 ಪ್ರಕಾರ ಕಾವೂರು, ಬಜಪೆ, ಸುರತ್ಕಲ್, ಮೂಡುಬಿದ್ರೆ ಹಾಗೂ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ