10:17 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಪು: ಗಾಳಿ ಮಳೆಗೆ ಆಟೋರಿಕ್ಷಾ ಮೇಲೆ ಉರುಳಿ ಬಿದ್ದ ಮರ; 2 ಮಂದಿ ದಾರುಣ ಸಾವು

11/05/2023, 22:53

ಉಡುಪಿ(reporterkarnataka.com): ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಗೆ ಎರಡು ಜೀವ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಕಾಪು ಕಡೆಯಿಂದ ಶಿರ್ವಾ ಕಡೆಗೆ ಮತ್ತು ಶಿರ್ವಾದಿಂದ ಕಾಪು ಕಡೆಗೆ ಪಯಣಿಸುತ್ತಿದ್ದ ಎರಡು ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ ಕಾಪುವಿನಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಪುಷ್ಪಾ(45) ಹಾಗೂ ಅವರ ಮೈದುನ ಸಾವನ್ನಪ್ಪಿದ್ದಾರೆ. ಶರೀಫ್ ಹಾಗೂ ದಿನೇಶ್ ಎಂಬವರ ರಿಕ್ಷಾದ ಮೇಲೆ ಮರ ಬಿದ್ದಿದೆ. ದುರಂತದಲ್ಲಿ ಅದೃಷ್ಟವಶಾತ್ ಎರಡೂ ಆಟೋಗಳ ಚಾಲಕರು ಹಾಗೂ ಇತರ ಪ್ರಯಾಣಿಕರು ಪಾರಾಗಿದ್ದಾರೆ. ರಿಕ್ಷಾ ಸಂಪೂರ್ಣ ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು