6:17 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸರಕಾರ ರಚನೆ: ರಾಜ್ಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಕಿಂಗ್ ಮೇಕರ್ ಸಿಂಗಾಪುರದಲ್ಲಿ!

12/05/2023, 18:16

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ, ಅತಂತ್ರ ಸದನ ನಿರ್ಮಾಣವಾಗುತ್ತದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಭವಿಷ್ಯ ಹೇಳಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ಎಲ್ಲರ ದೃಷ್ಟಿ ಬೆಂಗಳೂರಿನತ್ತ ನೆಟ್ಟಿದೆ. ಅತಂತ್ರ ಸ್ಥಿತಿ ನಿರ್ಮಾಣವಾದಗಲೆಲ್ಲ ಕಿಂಗ್ ಮೇಕರ್ ಆಗಿ ಹೊರ ಹೊಮ್ಮುತ್ತಿದ್ದ ಜನತಾ ದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ಜತೆಗೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ.
ಪ್ರತಿ ವಿಧಾನಸಭೆ ಚುನಾವಣೆಯಲ್ಲೂ ಜನತಾ ದಳ 30ರಿಂದ 40 ಸ್ಥಾನಗಳನ್ನು ಪಡೆಯುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವೋಟ್ ಶೇರಿಂಗ್ ನಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅತಂತ್ರ ಸದನ ನಿರ್ಮಾಣವಾಗುತ್ತದೆ. ಶೇಕಡಾವಾರು ಮತ ಗಳಿಕೆ ಹೆಚ್ಚಿದ್ದರೂ ಅದು ಸ್ಥಾನಗಳಾಗಿ ಪರಿವರ್ತನೆಗೊಳ್ಳಲು ವಿಫಲವಾಗುತ್ತದೆ. ಇದರ ಪರಿಣಾಮವಾಗಿ 2018 ವಿಧಾನಸಭೆ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರಕ್ಕಿಲ್ಲ. ಮೊದಲ ಒಂದು ವರ್ಷ ಕಾಂಗ್ರೆಸ್ ಮತ್ತು ಜನತಾ ದಳ ಸೇರಿ ಮೈತ್ರಿ ಸರಕಾರ ನಡೆಸಿತು. ಕುಮಾರಸ್ವಾಮಿ ಅವರು ನಿರಾಯಸವಾಗಿ ಎರಡನೇ ಬಾರಿ ಮುಖ್ಯಮಂತ್ರಿಯಾದರು. ನಂತರ ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಬಳಿಕ ಬಿಜೆಪಿಯೊಳಗಿನ ಆಂತರಿಕ ವೈರುದ್ಯದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಅವರ ಶಿಷ್ಯ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. 5 ವರ್ಷಗಳ ಅವಧಿಯಲ್ಲಿ ರಾಜ್ಯ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾಯಿತು. ಸ್ಥಿರ ಸರಕಾರ ನೀಡಲು ವಿಫಲವಾಯಿತು.
ಇದೀಗ 2023ರ ಚುನಾವಣೆಯಲ್ಲಿಯೂ ಯಾರಿಗೂ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಅತಂತ್ರ ಸ್ಥಿತಿ ನಿರ್ಮಾಣವಾದರೆ ಮತ್ತೆ ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತಾರೆ. ಸ್ವತಃ ತಾನೇ ಕಿಂಗ್ ಕೂಡ ಆಗುತ್ತಾರೆ. ಮೇ 10ರಂದು
ಮತದಾನ ಮುಗಿದ ತಕ್ಷಣ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ಯಾರಿಗೂ ಸ್ಪಷ್ಟ ಬಹುಮತ ಇಲ್ಲ ಎಂದು ಎಕ್ಸಿಟ್ ಫೋಲ್ ಭವಿಷ್ಯ ನುಡಿದ ಬಳಿಕ ಅವರು ಕೆಲವು ಷರತ್ತುಗಳನ್ನು ಹಾಕಿದ್ದಾರೆ. ಅವರಿಗೆ ಸೈದ್ದಾಂತಿಕ ತಾಕಲಾಟ ಏನೂ ಇಲ್ಲ. ಕಾಂಗ್ರೆಸ್ ಆಗುತ್ತೆ, ಬಿಜೆಪಿಯೂ ಆಗುತ್ತೆ.
ಯಾವ ಪಕ್ಷದ ಜತೆಯೂ ಅವರು ಮೈತ್ರಿ ಸರಕಾರ ರಚಿಸಲು ಸಿದ್ದರಿದ್ದಾರೆ. ಆದರೆ ಅವರ ಷರತ್ತನ್ನು ಒಪ್ಪಿಕೊಳ್ಳಬೇಕು. ಅದೇನೆಂದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು, ಜನತಾ ದಳ ತನ್ನ ಪ್ರಣಾಳಿಕೆಯಲ್ಲಿ ಮಾಡಿದ ಆಶ್ವಾಸನೆಯನ್ನು ಜಾರಿಗೊಳಿಸಬೇಕು, ಯಾವುದೇ ಹಸ್ತಕ್ಷೇಪ ಮಾಡದೆ ಮುಖ್ಯಮಂತ್ರಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಇದು ಕುಮಾರಸ್ವಾಮಿ ಅವರ ಷರತ್ತಾಗಿದೆ.
ರಾಜ್ಯದಲ್ಲಿ ಮತ್ತೆ ತ್ರಿಶಂಕು ಸದನ ನಿರ್ಮಾಣವಾದರೆ ಮತ್ತೆ ರಾಜಕೀಯ ಅಸ್ಥಿರತೆಗೆ ಕಾರಣವಾಗುತ್ತದೆ. ಬ್ಲ್ಯಾಕ್ ಮೇಲ್ ರಾಜಕೀಯ, ಒತ್ತಡದ ರಾಜಕೀಯ ಶುರುವಾಗುತ್ತದೆ‌ ಆಪರೇಷನ್ ಕಮಲ ಮತ್ತೆ ಗರಿಗೆದರುವ ಸಾಧ್ಯತೆಯೂ ಇದೆ. ಒಂದು ಪಕ್ಷದಿಂದ ಸಾಮೂಹಿಕ ವಲಸೆ ಹೋಗುವ ಮೂಲಕ ಪಕ್ಷಾಂತರ ಕಾಯ್ದೆಯಿಂದ ನುಣುಚಿಕೊಳ್ಳುವ ಅವಕಾಶವೂ ಇದೆ. ಇದೇನಿದ್ದರೂ ನಾಳೆ ಮತ ಎಣಿಕೆ ವರೆಗೆ ಕಾಯೋದು ಅನಿವಾರ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು