12:47 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ

13/05/2023, 00:08

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ‌. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು.
ಸುರತ್ಕಲ್ ನ ಎನ್ ಐಟಿಕೆಯಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕೆ ಕಾರ್ಯ ಶುರುವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಕ್ಷೇತ್ರದ ಮತ ಎಣಿಕೆಗೆ ತಲಾ 19 ಟೇಬಲ್ ಗಳನ್ನು ಅಳವಡಿಸಲಾಗಿದೆ. 5 ಟೇಬಲ್ ಪೋಸ್ಟಲ್ ಮತ ಎಣಿಕೆಗೆ ಹಾಗೂ 14 ಟೇಬಲ್ ಇವಿಎಂ ಮತ ಎಣಿಕೆಗೆ ಅಳವಡಿಸಲಾಗಿದೆ. ಜಿಲ್ಲೆಯ 8 ಕ್ಷೇತ್ರಗಳಿಗೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆ ಕಾರ್ಯಕ್ಕೆ ಅಳವಡಿಸಲಾಗಿದೆ. ಪ್ರತಿ ಕ್ಷೇತ್ರದ 19 ಕೌಟಿಂಗ್ ಟೇಬಲ್ ಗಳಿಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ 19 ಸಿಸಿ ಕ್ಮಾಮೆರಾ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು