1:46 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಹಾರಕ್ಕೆ ‘ಕೋಬ್ರಾ’ ಜಾರಿ

17/05/2023, 14:20

ಮಂಗಳೂರು(reporterlarnataka.com): ನಗರದ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಕೋಬ್ರಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟ್ರಾಫಿಕ್ ಜಾಮ್ ಉಂಟಾದ ಸ್ಥಳಕ್ಕೆ ಕ್ಷಿಪ್ರವಾಗಿ ತಲುಪಲು ಇದು ಪೊಲೀಸರಿಗೆ ಸಹಾಯವಾಗಲಿದೆ.


ಮಂಗಳೂರು ನಗರದಲ್ಲಿ ವಾಹನ ಸಂಚಾರದ ಒತ್ತಡ ಅತೀ ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲಂತೂ ಸಂಚಾರ ಪೊಲೀಸರಿಗೆ ಸಂಚಾರ ನಿರ್ವಹಣೆ ಒಂದು ಸವಾಲಾಗಿ ಪರಿಣಮಿಸಿದೆ. ನಗರದಲ್ಲಿ ಸುಗಮ ಸಂಚಾರವನ್ನು ಜಾರಿ ಮಾಡಲು ಎಷ್ಟೇ ಆಧುನಿಕ ತಂತ್ರಜ್ಞಾನಗಳನ್ನು ಬಳಸಿದರೂ ಸಹ ಸಂಚಾರ ಪೊಲೀಸರ ಇರುವಿಕೆಯು ಅನಿವಾರ್ಯವಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ ಸಣ್ಣ ಪುಟ್ಟ ಅಪಘಾತ ಸಂಭವಿಸಿ ವಾಹನ ಸವಾರರುಗಳು ಜಗಳವಾಡಿಕೊಂಡ ಸಂದರ್ಭದಲ್ಲಿ ವಾಹನಗಳನ್ನು ರಸ್ತೆಯ ಮಧ್ಯದಲ್ಲಿಯೇ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಾರೆ ಹಾಗೂ ಇಂತಹ ಇತರೆ ಹಲವಾರು ಸಮಯಗಳಲ್ಲಿ ಆ ಸ್ಥಳಕ್ಕೆ ತುರ್ತಾಗಿ ಹೋಗಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕಾರಿಯಾಗುವಂತೆ ಮಂಗಳೂರು ನಗರದಲ್ಲಿ, ನಾಲ್ಕು ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಮೇ 16ರಂದು ಸಂಚಾರ ಪೂರ್ವ ಪೊಲೀಸ್ ಠಾಣೆ ಮತ್ತು ಸಂಚಾರ ಪಶ್ಚಿಮ ಪೊಲೀಸ್ ಠಾಣೆಗೆ ಉಪಯೋಗಿಸಿಕೊಂಡು ಸಂಚಾರ ಸುವ್ಯವಸ್ಥೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಸ್ತಾಂತರಿಸಲಾಗಿದೆ. ಈ ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಠಾಣಾ ಸರಹದ್ದಿನಲ್ಲಿ ನೊಂದವರಿಗೆ ಸಹಕರಿಸಲು ಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು