4:35 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್; ಸಾಲುಗಟ್ಟಿ ನಿಂತ ವಾಹನಗಳು; ಕೆಎಸ್ಸಾರ್ಟಿಸಿ ಬಸ್ ಸ್ವಲ್ಪದರಲ್ಲೇ ಪಾರು

17/05/2023, 18:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.
ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.


ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ಆದರೆ ಕೆಲವು ದ್ವಿಚಕ್ರ ವಾಹನ ಸವಾರರು ಇದ್ದುದರಿಂದ ಅಪಾಯದ ಸೂಚನೆ ಎದ್ದು ಕಾಣುತ್ತಿತ್ತು.ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು