ಇತ್ತೀಚಿನ ಸುದ್ದಿ
ಹಿರಿಯ ಮುತ್ಸದ್ಧಿ ಪೂಜಾರಿಯ ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ಖಾದರ್: ಬಂಟ್ವಾಳದ ಮನೆಯಲ್ಲಿ ಉಭಯ ಕುಶಲೋಪರಿ
17/05/2023, 21:52
ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com
ಕಾಂಗ್ರೆಸ್ ನ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ
ಭೇಟಿ ನೀಡಿ ಹಿರಿಯ ಮುತ್ಸದ್ಧಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಖಾದರ್ ಅವರು ಹಿರಿಯ ನಾಯಕ ಜನಾರ್ಧನ ಪೂಜಾರಿಯವರ ಮಾರ್ಗದರ್ಶನ ಮತ್ತು ಆಶೀರ್ವಾದದಿಂದ ಈ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಹೇಳಿದರು.
ರಾಜಕೀಯ ಬೆಳವಣಿಗೆಗೆ ಕಾರಣೀಕರ್ತರಾದ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಸಲಹೆಯಂತೆ ಕಾಂಗ್ರೆಸ್ ಪಕ್ಷದ ಸರ್ವ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷವನ್ನು ಸಂಘಟನಾತ್ಮಕ ಮಟ್ಟದಲ್ಲಿ ಬೆಳೆಸುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸರಕಾರದ ಎಲ್ಲ ಯೋಜನೆಯನ್ನು , ಕಾರ್ಯಕ್ರಮಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ , ಸೌಹಾರ್ದ, ಸಾಮರಸ್ಯದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಖಾದರ್ ನುಡಿದರು.
ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮಂತ್ರಿ ಸ್ಥಾನ ಕೊಡುವುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಇಲ್ಲಿ ತನಕ ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ ತೃಪ್ತಿ ನನಗಿದೆ ಎಂದರು.
ಪೂಜಾರಿ ಅವರು ಈ ಸಂದರ್ಭದಲ್ಲಿ ಖಾದರ್ ಅವರಿಗೆ ಕೆಲವೊಂದು ಸಲಹೆಗಳನ್ನು ನೀಡಿದರು.