12:38 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

2000 ರೂಪಾಯಿ ನೋಟಿನ ಕಥೆ ಮುಗಿದರೂ ಕಾಫಿನಾಡ ಯುವಕನ ಬಾಳಲ್ಲಿ ಆ ನೋಟು ಎವರ್‍ ಗ್ರೀನ್ !!

21/05/2023, 13:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇಣು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ, ಜಿಲ್ಲೆಯ ಕಳಸ ತಾಲೂಕಿನ ತೇಜು ಎಂಬ ಯುವಕನ ಬದುಕಲ್ಲಿ ಎಷ್ಟೇ ವರ್ಷಗಳು ಕಳೆದರೂ ಆ 2000 ರೂಪಾಯಿ ಮುಖಬೆಲೆಯ ನೋಡು ಹಚ್ಚಹಸಿರಾಗೇ ಇರಲಿದೆ. ಏಕೆಂದರೆ, ಆ ಯುವಕ ಪ್ರಧಾನಿ ಮೋದಿ ಮೇಲಿನ ಅಭಿಮಾನಕ್ಕಾಗಿ ತನ್ನ ಮದುವೆಯ ಆಮಂತ್ರಣ ಪತ್ರಿಕೆಯ ಫ್ರೆಂಡ್ಸ್ ಕಾರ್ಡ್‍ನ್ನ 2000 ರೂಪಾಯಿ ನೋಟಿನಲ್ಲೇ ಮುದ್ರಣ ಹಾಕಿಸಿದ್ದರು.

ಆ ಮದುವೆ ಆಮಂತ್ರಣ ಪತ್ರಿಕೆಯನ್ನ ನೋಡಿದರೆ 2000 ರೂಪಾಯಿ ನೋಟನ್ನ ನೋಡುವುದೇ ಬೇಡ ಅಷ್ಟು ಅಚ್ಚುಕಟ್ಟಾಗಿ ಮಾಡಿಸಿದ್ದರು. ನೋಟಿನಲ್ಲಿರುವ ನಂಬರ್, ನೋಟಿನ ಮಧ್ಯ ಭಾಗದಲ್ಲಿ ಇರುವ ಎಲ್ಲಾ ಭಾಷೆಯಲ್ಲಿ 2000 ರೂಪಾಯಿ ಎಂದು ಇರುವ ಜಾಗದಲ್ಲಿ ತನ್ನ ಹೆಸರಿನ ಜೊತೆ ಮದುವೆಯಾಗುವ ಹುಡುಗಿಯ ಹೆಸರನ್ನ ಹಾಕಿಸಿದ್ದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ಇರುವ ಜಾಗದಲ್ಲಿ ಲವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದು ಮಾಡಿಸಿದ್ದರು. ನೋಟಿನ ಮಧ್ಯದಲ್ಲಿ ಮಹಾತ್ಮ ಗಾಂಧಿಜೀಯವರ ಫೋಟೋ ಇರುವ ಜಾಗದಲ್ಲಿ ವಧು-ವರರನ್ನ ಆಶೀರ್ವದಿಸುತ್ತಿರುವ ಗಣಪತಿಯ ಭಾವಚಿತ್ರವಿದೆ. ನೋಟಿನ ಮತ್ತೊಂದು ಬದಿಯಲ್ಲಿ ಸ್ಕ್ಯಾನರ್ ಕೂಡ ಇದ್ದು. ಅದನ್ನ ಸ್ಕ್ಯಾನ್ ಮಾಡಿದರೆ ಕಳಸ ತಾಲೂಕಿನ ಮದುವೆ ಮಂಟಪಕ್ಕೆ ಬರುವ ಮಾರ್ಗ ತೋರಿಸುವಂತಿತ್ತು. ಸುಮಾರು 1500 ಕಾರ್ಡ್ ಮಾಡಿಸಿದ್ದ ಯುವಕ ಸ್ನೇಹಿತರಿಗೆಲ್ಲಾ ಅದೇ ಕಾರ್ಡ್ ಹಂಚಿದ್ದ. ಇದೀಗ ಆರ್.ಬಿ.ಐ. 2000 ನೋಟನ್ನ ಹಿಂಪಡೆಯುತ್ತಿರುವಂತೆ ಯುವಕ ತೇಜು ಸ್ನೇಹಿತರು ಆ ನೋಟಿನ ಇನ್ವಿಟೇಷನ್ ಕಾಡ್ ಕಳಿಸಿ ನೆನಪಿಸುತ್ತಿದ್ದಾರೆ. ಉಡುಪಿಯಲ್ಲಿ ಪ್ರಿಂಟ್ ಹಾಕಿಸಿದ್ದ ಈ ಕಾರ್ಡನ್ನ ಅಚ್ಚುಕಟ್ಟಾಗಿ ಪ್ರಿಂಟ್ ಹಾಕಿಕೊಡಲು ಉಡುಪಿಯ ಆಪ್‍ಸೆಟ್ ಪ್ರಿಂಟರ್‍ನವರು ಕೂಡ ವಾರಗಟ್ಟಲೇ ಟೈಂ ತೆಗೆದುಕೊಂಡಿದ್ದರು. ಇನ್ನು ಮುಂದೆ ಅದೆಲ್ಲೆ ನೆನಪಷ್ಟೆ. ಮೋದಿ ಮೇಲಿನ ಅಭಿಮಾನಕ್ಕಾಗಿ ವಿಶೇಷವಾಗಿ ಮದುವೆ ಆಮಂತ್ರಣ ಕಾರ್ಡ್ ಮಾಡಿಸಬೇಕೆಂದು ಡಿಫರೆಂಟ್ ಆಗಿ ಕಾರ್ಡ್ ಮಾಡಿಸಿದ್ದ ಕಳಸ ತಾಲೂಕಿನ ಯುವಕನ ಬಾಳಲ್ಲಿ 2000 ರೂಪಾಯಿ ನೋಟು ಎಂದೆಂದೂ ಹಚ್ಚಹಸಿರಾಗಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು