ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ಇನ್ನಿಲ್ಲ ಜೀರೋ ಟ್ರಾಫಿಕ್ ವ್ಯವಸ್ಥೆ: ಜನಸ್ನೇಹಿಯಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
22/05/2023, 10:28

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ವಾಹನ ಸಂಚಾರಕ್ಕೆ ‘ಜೀರೋ ಟ್ರಾಫಿಕ್’ ಪ್ರೋಟೋಕಾಲ್ ಹಿಂಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಝೀರೋ ಟ್ರಾಫಿಕ್‌ನಿಂದಾಗಿ ನಿರ್ಬಂಧಗಳಿರುವ ರಸ್ತೆಯುದ್ದಕ್ಕೂ ಪ್ರಯಾಣಿಸುವ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿದ ನಂತರ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳ ವಾಹನ ಸಂಚಾರಕ್ಕೆ, ಕೇಂದ್ರ ಸಚಿವರುಗಳ ವಾಹನ ಸಂಚಾರಕ್ಕೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗುತ್ತಿತ್ತು.