7:59 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ದಾಂಜಲಿ; ಉಂಗುರದಿಂದ ಮಗಳ ಗುರುತು ಪತ್ತೆ ಹಚ್ಚಿದ್ದ ತಂದೆ ಹಾಜರು

22/05/2023, 18:38

ಮಂಗಳೂರು(reporterkarnataka.com): ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 13 ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.


2010ರ ಮೇ 22ರಂದು ಬೆಳಗ್ಗೆ ದುಬೈನಿಂದ ಬಂದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್ ವೇಯಲ್ಲಿ ನಿಲ್ಲದೇ ಸೂಚನಾ ಗೋಪುರದ ಕಂಬಗಳಿಗೆ ಡಿಕ್ಕಿಯಾಗಿ ಅದನ್ನು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ದುರಂತ ಸಂಭವಿಸಿತ್ತು. ಆ ವೇಳೆ ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅಪಘಾತದಲ್ಲಿ 158 ಮಂದಿ ಸಾವನ್ನಪ್ಪಿದ್ದು, 8 ಮಂದಿ ಬದುಕುಳಿದಿದ್ದರು.
ಸಾವನ್ನಪ್ಪಿದ 158 ಮಂದಿಯಲ್ಲಿ 12 ಮಂದಿಯ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಗುರುತು ಪತ್ತೆಯಾಗದವರ ಮೃತದೇಹವನ್ನು ತಣ್ಣೀರು ಬಾವಿಯ ನದಿತೀರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಆ ಬಳಿಕ ಇದೇ ಸ್ಥಳದಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿತ್ತು. ಇಂದು ಜಿಲ್ಲಾಡಳಿತದಿಂದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
2010ರ ಮೇ 22 ರಂದು ಸಂಭವಿಸಿದ ವಿಮಾನ ದುರಂತದಲ್ಲಿ ನೂರಾರು ಜನ ಮೃತ ಪಟ್ಟಿದ್ದಾರೆ, ಅವರ ಸ್ಮರಣಾರ್ಥ ಈ ಈ ಸ್ಮಾರಕ ನಿರ್ಮಿಸಲಾಗಿದೆ, ಸರ್ಕಾರದ ಎಲ್ಲಾ ಇಲಾಖೆಗಳ ವತಿಯಿಂದ ಹುತಾತ್ಮರಾದವರಿಗೆ ಗೌರವವನ್ನು ಸಲ್ಲಿಸುವುದು ಕರ್ತವ್ಯ ಹಾಗಾಗಿ ಈ ದಿನ ನಾವು ಪುಷ್ಪ ಗುಚ್ಚವನ್ನು ಅರ್ಪಿಸಿ ಅವರ ಆತ್ಮಕ್ಕೆ ಶಾಂತಿ ಕೋರಿ ಅವರ ಕುಟುಂಬಗಳಿಗೆ ಧೈರ್ಯ ನೀಡುವ ಮೂಲಕ ಅವರೊಂದಿಗೆ ಜಿಲ್ಲಾಡಳಿತ ಸದಾ ಇರುತ್ತದೆ ಎಂಬುದನ್ನು ತಿಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್.ಎಂ.ಆರ್ ತಿಳಿಸಿದರು.
ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಹಿಳೆಯೊಬ್ಬರ ತಂದೆ ಹರಿಶ್ಚಂದ್ರ ಈ ಸಂದರ್ಭದಲ್ಲಿ ಮಾತನಾಡಿ, ದುಬೈನಿಂದ ಬರುತ್ತಿದ್ದ ಮಗಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದಾಗ ಅಪಘಾತವಾದ ಸುದ್ದಿ ಬಂತು. ಅದರಲ್ಲಿ ಇದ್ದ ಮಗಳು ಮೃತಪಟ್ಟಿದ್ದಳು. ಆಕೆಯ ಉಂಗುರದ ಮೂಲಕ ಮೃತದೇಹವನ್ನು ಗುರುತು ಹಿಡಿಯಲಾಯಿತು. 13 ವರ್ಷವಾದರೂ ನೆನಪು ಮಾಸಿಲ್ಲ ಎಂದರು.
ಶ್ರದ್ದಾಂಜಲಿ ಅರ್ಪಣಾ ಕಾರ್ಯಕ್ರಮದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ನವ ಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು