12:30 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಕೊನೆಗೊಳ್ಳಬೇಕು: ಖಾಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

23/05/2023, 21:32

ಬೆಂಗಳೂರು(reporterkarnataka.com): ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿಗೆ ಮಂಗಳ ಹಾಡಬೇಕು. ಕಾನೂನು ಸುವ್ಯವಸ್ಥೆಯ ವಿಷಯ ಬಂದಾಗ ಯಾವುದೇ ಧರ್ಮದ ಕುರಿತು ತಾರತಮ್ಯ ತೋರಿಸಬಾರದು. ಕಾನೂನು ಅಡಿಯಲ್ಲಿ ಎಲ್ಲರನ್ನು ಸಮಾನವಾಗಿ ಕಾಣಬೇಕೆಂದು ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಪಾಠ ಬೋಧಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟಿದರೆ ಹಿರಿಯ ಪೊಲೀಸ್ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಸಮಾಜದ ಶಾಂತಿ, ಸಹಬಾಳ್ವೆಗೆ ಅಡ್ಡಿಪಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದರು.
ಪೊಲೀಸರಿಗೆ ಜನಸ್ನೇಹಿಯಾಗಲು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೌಡಿಸಂ, ಕಾನೂನು ಬಾಹಿರ ಚಟುವಟಿಕೆ, ಮಾದಕ ದ್ರವ್ಯ ವ್ಯವಹಾರ ನಡೆದರೆ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರವಲ್ಲದೆ ಡಿಸಿಪಿ ಅವರು ಕೂಡ ಇದರ ಹೊಣೆಗಾರಿಕೆಯನ್ನು ವಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜನರು ಬದಲಾವಣೆ ಬಯಸಿ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿದ್ದಾರೆ. ಜನರ ಆಶೋತ್ತರದ ಬಗ್ಗೆ ಪೊಲೀಸ್ ಇಲಾಖೆ ಸ್ಪಂದಿಸಬೇಕು. ಸಮಾಜದಲ್ಲಿ ಶಾಂತಿಗೆ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು