11:18 AM Wednesday23 - July 2025
ಬ್ರೇಕಿಂಗ್ ನ್ಯೂಸ್
ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ…

ಇತ್ತೀಚಿನ ಸುದ್ದಿ

ಪವರ್ ಶೇರಿಂಗ್: ನಿಲ್ಲದ ಕುರ್ಚಿ ಕಾದಾಟ; ಡಿಕೆ ಬ್ರದರ್ಸ್- ಎಂ.ಬಿ. ಪಾಟೀಲ್ ನಡುವೆ ಅಂತರ್ಯುದ್ಧ!

24/05/2023, 14:50

ನಿವೇದಿತಾ ರಮೇಶ್ ಬೆಂಗಳೂರು

info.reporterkarnataka@gmail.com

ಮಳೆ ನಿಂತರೂ ಹನಿ ನಿಂತಿಲ್ಲ ಎನ್ನುವಂತೆ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಎಲ್ಲ ನಡೆದು ಹೋದರೂ ಕುರ್ಚಿ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಪರಮಾಪ್ತ ಎಂ.ಬಿ. ಪಾಟೀಲ್ ನಡುವೆ ಅಂತರ್ಯುದ್ಧ ಆರಂಭವಾಗಿದೆ.
ಮೈಸೂರಿನಲ್ಲಿ ನಿನ್ನೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಂ.ಬಿ. ಪಾಟೀಲ್ ಅವರು ಪವರ್ ಶೇರಿಂಗ್ ಬಗ್ಗೆ ಮಾತನಾಡಿದ್ದರು. ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಪವರ್ ಶೇರಿಂಗ್ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ ಎಂದು ನುಡಿದಿದ್ದರು. ಈ ಹೇಳಿಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೆರಳಿಸಿತ್ತು.
ಎಂ.ಬಿ. ಪಾಟೀಲ್ ಅವರೇನು ಹೈಕಮಾಂಡಾ? ಅಲ್ಲ ಕೆಪಿಸಿಸಿ ಅಧ್ಯಕ್ಷರಾ? ಎಂದು ಡಿಕೆಶಿ ಗರಂ ಆಗಿಯೇ ಪ್ರಶ್ನಿಸಿದ್ದರು. ಇದೀಗ ಬುಧವಾರ ಬೆಳಗ್ಗೆ ವಿಧಾನಸಭೆಯ ಸಮ್ಮೇಳನ ಹಾಲ್ ನಲ್ಲಿ ಡಿ.ಕೆ. ಶಿವಕುಮಾರ್ ಅವರ ತಮ್ಮ ಡಿ.ಕೆ. ಸುರೇಶ್ ಮತ್ತು ಎಂ.ಬಿ. ಪಾಟೀಲ್ ಅವರು ಪರಸ್ಪರ ಮುಖಾಮುಖಿಯಾಗಿದ್ದಾರೆ. ಸುರೇಶ್ ಅವರು ಎಂ‌.ಬಿ. ಪಾಟೀಲ್ ಮುಖ ನೋಡಿ ಗುರಾಯಿಸಿದ್ದಾರೆ ಎಂಬ ಆರೋಪವಿದೆ.
ಹಾಗೆ ಸ್ವಲ್ಪ ಬಿಗಿಯಾಗಿರಲಿ ಎಂದು ಎಚ್ಚರಿಕೆ ರೀತಿಯಲ್ಲಿ ಪಾಟೀಲ್ ಅವರಿಗೆ ಹೇಳಿದ್ದಾರೆ. ಪಾಟೀಲ್ ಅವರು ಸುರೇಶ್ ಅವರ ಕೈ ಹಿಡಿದು ಚೇಂಬರ್ ಗೆ ಕರೆದಿದ್ದಾರೆ. ಸುರೇಶ್ ಮತ್ತೆ ಗುರಾಯಿಸಿದಾಗ ಪಾಟೀಲ್ ಅವರು ಸುರೇಶ್ ಅವರ ಕೈಬಿಟ್ಟಿದ್ದಾರೆ. ಆ ಮೇಲೆ ಮಾತನಾಡುವೆ ಎಂದು ಪಾಟೀಲ್ ತೆರಳಿದ್ದಾರೆ. ಡಿ.ಕೆ. ಸುರೇಶ್ ಅವರ ವರ್ತನೆ ಬಗ್ಗೆ ಕೆಲವು ಕಾಂಗ್ರೆಸ್ ಶಾಸಕರು ಕೂಡ ಕಕ್ಕಾಬಿಕ್ಕಿಯಾಗಿದ್ದಾರೆ. ಸ್ಥಳದಲ್ಲಿದ್ದ ಗನ್ ಮ್ಯಾನ್ ಗಳು ಅಸಹಾಯಕರಾಗಿ ನಿಂತು ನೋಡಿದ್ದಾರೆ ಎಂದು ತಿಳಿದು ಬಂದಿದೆ.
ನಂತರ ಮಾಧ್ಯಮ ಜತೆ ಮಾತನಾಡಿದ ಡಿ.ಕೆ. ಸುರೇಶ್ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿಯಾಗಿದ್ದವರು. ಮತ್ತೆ 5 ವರ್ಷವೂ ಮುಖ್ಯಮಂತ್ರಿಯಾಗಲಿ, ಯಾರು ಬೇಡ ಅಂದವರು? ಎಂ.ಬಿ. ಪಾಟೀಲ್ ಅವರು ಕೂಡ ಮುಖ್ಯಮಂತ್ರಿಯಾಗಲಿ ಎಂದು ಗರಂ ಆಗಿ ಹೇಳಿದ್ದರು. ಒಟ್ಟಿನಲ್ಲಿ ಹೈಕಮಾಂಡ್ ಮಧ್ಯ ಪ್ರವೇಶಿಸುವವರೆಗೆ ಕುರ್ಚಿ ಕಾದಾಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು