11:12 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತಾಯಿ- ಮಗು ಕಾಣೆ: ಪತ್ತೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರ ಕೋರಿಕೆ

26/05/2023, 18:16

ಮಂಗಳೂರು(reporter Karnataka.com): ಸುಮಿತಾ ರಾಣಿ ಸರ್ಕಾರ್ (23) ಹಾಗೂ ಅವರ ಮಗಳು ರಿಯಾ ನಾಮಾ(6) ಎಂಬವರು ಮೇ 23ರಿಂದ ಕಾಣೆಯಾಗಿರುವ ಬಗ್ಗೆ ಇಲ್ಲಿನ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಯಿ ಚಹರೆ:
ಎತ್ತರ 4.8 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈ ಬಣ್ಣ ಹಾಗೂ ಸಾಧಾರಣ ಶರೀರ ಹೊಂದಿರುತ್ತಾರೆ ಕಾಣೆಯಾದ ದಿನದಂದು ಹಳದಿ ಬಣ್ಣದ ಟೀ-ಶರ್ಟ್ ಮತ್ತು ಕಪ್ಪುಬಿಳಿ ಗೆರೆಯ ಪ್ಯಾಂಟ್ ಧರಿಸಿರುತ್ತಾರೆ.
ಮಗಳ ಚಹರೆ:
ಎತ್ತರ 2.5 ಅಡಿ, ದುಂಡು ಮುಖ, ಎಣ್ಣೆಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಪಿಂಕ್ ಬಣ್ಣದ ಟೀ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ತಾಯಿ ಹಾಗೂ ಮಗಳು ಬೆಂಗಾಲಿ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
ತಾಯಿ ಹಾಗೂ ಮಗುವಿನ ಪತ್ತೆಯಾದಲ್ಲಿ ಪೊಲೀಸ್ ಕಟ್ರೋಲ್ ರೂಂ ದೂರವಾಣಿ ಸಂಖ್ಯೆ: 0824-2220800, ಪೊಲೀಸ್ ಇನ್ಸ್‍ಪೆಕ್ಟರ್ ಮೊ.ಸಂಖ್ಯೆ-9480805339, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮೊ.ಸಂಖ್ಯೆ-9480805346 ಹಾಗೂ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220518ಗೆ ಕರೆ ಮಾಡಿ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು