11:28 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ ಕೀಳು ರಾಜಕೀಯ ನಿಲ್ಲಿಸಲಿ, ನೆಟ್ಟಾರ್ ಪತ್ನಿ ಜತೆ ಕಾಂಗ್ರೆಸ್ ಮಾತುಕತೆ ನಡೆಸಿದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್

27/05/2023, 17:37

ಮಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎನ್ನುವುದು ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ? ಅದೇ ರೀತಿ ನೂತನ ಕುಮಾರಿ
ಅವರ ಕೆಲಸವೂ ರದ್ದಾಗಿದೆ. ಬಿಜೆಪಿಯವರಿಗೆ ನೂತರವರ ಮೇಲೆ ಅಷ್ಟೊಂದು ಅಭಿಮಾನ ಇರುತ್ತಿದ್ದರೆ ಈ ಮೊದಲೇ ಯಾಕೆ ಅವರಿಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಪ್ರಯತ್ನಿಸಿಲ್ಲ. ಅವರು ಇಷ್ಟು ದಿನವೂ ಮಾಡಿದ್ದೆಲ್ಲ ನಾಟಕ ಎಂದು ಇದರಿಂದ ಬಹಿರಂಗವಾಗಿದೆ ಎಂದಿದ್ದಾರೆ.
ನೂತನರವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಖಂಡಿತವಾಗಿಯೂ ಬದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಪರವಾಗಿ ನೂತನ ಅವರಲ್ಲಿ ಮಾತುಕತೆ ನಡೆಸಿದ್ದೇವೆ. ಕೂಡಲೇ ಅವರಿಗೆ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಕೀಳುಮಟ್ಟದ ರಾಜಕೀಯದ ಮೂಲಕ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಕೆಲಸವನ್ನು ಬಿಡಲಿ. ಇಂತಹ ಕೀಳು ರಾಜಕೀಯ ಮುಂದೆ ನಡೆಯುವುದಿಲ್ಲ ಎಂದು ಪದ್ಮರಾಜ್ ಆರ್. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು