ಇತ್ತೀಚಿನ ಸುದ್ದಿ
ಲೈಂಗಿಕ ದೌರ್ಜನ್ಯ ಆರೋಪಕ್ಕೊಳಗಾದ ಬಿಜೆಪಿ ಸಂಸದನ ಬಂಧಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
28/05/2023, 21:30
ಬೆಂಗಳೂರು(reporterkarnataka.com): ಕೇಂದ್ರ ಬಿಜೆಪಿ ಸರಕಾರ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರ ಹಿಸಿದ್ದಾರೆ.
ಲೈಂಗಿಕ ದೌರ್ಜನ್ಯ ವನ್ನು ಖಂಡಿಸಿ ದಿಲ್ಲಿಯ ಜಂತರ್ ಮಂಥರ್ ನಲ್ಲಿ ಮಹಿಳಾ ಕುಸ್ತಿಪಟುಗಳು ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪೊಲೀಸರು ಬಲವಂತವಾಗಿ ಅವರನ್ನು ಸ್ಥಳಾಂತರಿಸಿದ್ದಾರೆ.