8:59 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಬಂಟ್ವಾಳ: ಆಟೋರಿಕ್ಷಾ- ಬೈಕ್ ಮುಖಾಮುಖಿ ಡಿಕ್ಕಿ: 4 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

30/05/2023, 18:57

ಬಂಟ್ವಾಳ(reporterkarnataka.com): ಅಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ.
ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಜೊಸ್ಟಿಲಿನ್ ಡಿಸೋಜ, ಸಹ ಸವಾರ ರಶ್ಮಿತ್ ಗಾಯಗೊಂಡಿದ್ದಾರೆ
ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಭಂಡಾರಿಬೆಟ್ಟು ಎಂಬಲ್ಲಿ ರಿಕ್ಷಾ ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ. ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಮೂರ್ತಿ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು