1:33 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ 

18/07/2021, 19:07

ಮಂಗಳೂರು(reporterkarnataka news); ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ‌ ನೂತನ ಜಿಲ್ಲಾ ಪದಾಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ “ಪದಗ್ರಹಣ ಸಮಾರಂಭ” ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ನಗರದ ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. 

ಈ ವೇಳೆ “ಶಿಕ್ಷಣ ನಮ್ಮ ಹಕ್ಕು” ವಿದ್ಯಾರ್ಥಿ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಪಿ.ವಿ. ಮೋಹನ್ ಅವರು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.


ಮಾಜಿ ಸಚಿವರ ಬಿ.ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಐವನ್ ಡಿಸೋಜ, ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎನ್ ಎಸ್ ಯುಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಕಾಂಗ್ರೆಸ್ ಮುಖಂಡರಾದ ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭೋದಯ ಆಳ್ವ, ನೀರಜ್ ಪಾಲ್, ಅನಿಲ್ ಕಂಕನಾಡಿ, ಸುಹೈಲ್ ಕಂದಕ್, ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾಕೇಶ್ ದೇವಾಡಿಗ, ಉಪಾಧ್ಯಕ್ಷ ಶೇಖ್ ಅಫ್ಶನ್ ಹಾಗೂ ಇನ್ನಿತರ‌ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು