4:58 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್‌ಆರ್‌ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ

01/06/2023, 11:42

ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್‌ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು.
ಎನ್‌ಆರ್‌ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.


ಮೈಕಲ್ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ ಸಣ್ಣ ವಯಸ್ಸಿನಲ್ಲಿ ತಮ್ಮ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಯುಎಇಯಲ್ಲಿನ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮಾರುಕಟ್ಟೆ ಅಧ್ಯಯನವನ್ನು ನಡೆಸಿ, ಸ್ಥಳೀಯರ ಸಹಾಯದಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ, ವ್ಯಾಪಾರದಲ್ಲಿ ಹೂಡಿಕೆ ಮಾಡಿದರು. ನಂಬಿಕಸ್ಥ ಜನರು ದೊಡ್ಡ ಪ್ರಮಾಣದಲ್ಲಿ ವಂಚಿಸಿದಾಗ ಧೈರ್ಯಗುಂದದೆ, ವ್ಯಾಪಾರವನ್ನು ಪುನರಾಂಭಿಸಿದರು. ಅವರ
ಪತ್ನಿ ಫ್ಲೇವಿ ಅವರ ಸಹಾಯದಿಂದ ಮುನ್ನಡೆದುದರ ಮಾತನಾಡಿದರು. ಸಭಿಕರಲ್ಲಿ ನೆರೆದಿದ್ದ ಯುವ ಉದ್ಯಮಿಗಳಿಗೆ ‘ನಿಮ್ಮ ವ್ಯವಹಾರವು ಆರ್ಥಿಕ ಪಾರದರ್ಶಕತೆಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ, ನಿಮ್ಮ ಕೆಲಸದ ಬಗ್ಗೆ ಜ್ಞಾನ ಮತ್ತು ಹಣಕಾಸಿನ ಸರಿಯಾದ ನಿರ್ವಹಣೆ ವ್ಯವಹಾರದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ. ನಿಮ್ಮ ವ್ಯವಹಾರ ವಿಫಲವಾದರೂ ನಿಮ್ಮ ಹೆಸರು ಖ್ಯಾತಿಯಲ್ಲಿರಬೇಕು’ ಎಂಬ ಸಲಹೆ ನೀಡಿದರು.
ರಚನಾ ಸಂಸ್ಥೆಯ ಅಧ್ಯಕ್ಷ ವಿನ್ಸೆಂಟ್ ಕುಟಿನ್ಹಾ ಸ್ವಾಗತಿಸಿ, ಉಪಾಧ್ಯಕ್ಷ ಸಿಎ ರುಡಾಲ್ಫ್ ರೋಡ್ರಿಗಸ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಆಡಳಿತ ಮಂಡಳಿ ಸದಸ್ಯರಾದ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಯುಲಾಲಿಯಾ ಡಿಸೋಜಾ ವಂದಿಸಿದರು. ಭೋಜನದೊಂದಿಗೆ ಸಭೆ ಮುಕ್ತಾಯವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು