5:25 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ

01/06/2023, 23:09

ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು