11:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು