ಇತ್ತೀಚಿನ ಸುದ್ದಿ
ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ
18/07/2021, 20:47
ಮಂಗಳೂರು(reporterkarnataka news): ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ.
ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಪ್ರತಿದಿನ ಸಂಚಾರ ಮಾಡುವವರ ಅನುಕೂಲಕ್ಕಾಗಿ ಈ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏನೆಲ್ಲ ಷರತ್ತು?
* ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,
* ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು.