5:52 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!!

02/06/2023, 22:32

ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ.
ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಇವರಲ್ಲಿ ಯತೀಶ್, ಸಚಿನ್ ಹಾಗೂ ಸುಹಾನ್ ಪ್ರಮುಖ 3 ಮಂದಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಮೂವರು
ವಿದ್ಯಾರ್ಥಿನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ಪರಾರಿಯಾಗಿದ್ದರು. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಮೊದಲಿಗೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ವಶಕ್ಕೆ ಪಡೆದವರ ಸಂಖ್ಯೆ 7ಕ್ಕೇರಿದೆ.
ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು