6:55 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್

03/06/2023, 15:54

ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲ 110 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಮಂದಿ ಪ್ರಯಾಣಿಕರಿದ್ದರು. ಇವರೆಲ್ಲ ಬೆಂಗಳೂರಿನಿಂದ ದುರಂತಕ್ಕೀಡಾದ ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಾಯಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಸ್ಥಳಾಂತರಗೊಂಡಿದ್ದರು. ಹಾಗಾಗಿ ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.

ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು