12:25 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು