10:48 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬದಲಾವಣೆ: ಯಡಿಯೂರಪ್ಪ ಜತೆಗೆ ಶೆಟ್ಟರ್, ಈಶ್ವರಪ್ಪ ಅವರಿಗೂ ಕೊಕ್; ನಳಿನ್  ಸ್ಫೋಟಕ ಆಡಿಯೋ ಬಹಿರಂಗ

19/07/2021, 07:57

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಜತೆಗೆ ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಈಶ್ವರಪ್ಪ ಅವರಿಗೂ ಸಂಪುಟದಿಂದ ಖಾಯಂ ಆಗಿ ಹೊರಗಿಡುವ ಮಾಹಿತಿ ಲಭಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋ ಮೂಲಕ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿದೆ.

ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಪ್ತರ ಜತೆ ತುಳು ಭಾಷೆಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ನಳಿನ್‌ ಅವರು ತುಳುವಿನಲ್ಲಿ ಸಂಭಾಷಣೆ ನಡೆಸುತ್ತಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದ್ದಾರಲ್ಲದೆ ಶೆಟ್ಟರ್, ಈಶ್ವರಪ್ಪ ಅವರನ್ನು ಕೈಬಿಡುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳಿನ್‌  ಸುಳಿವು ನೀಡಿದ್ದಾರೆ.

ಯಾರಿಗೂ ಹೇಳಬೇಡ ಎಂದು ತುಳು ಭಾಷೆಯಲ್ಲಿ ಹೇಳುತ್ತಾ, ನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದು ನಳಿನ್ ಮಾಹಿಯನ್ನು ತನ್ನ ಆಪ್ತರು ಜತೆ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು