6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ಅದು ಕಿಡಿಗೇಡಿಗಳ ಕೃತ್ಯ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸ್ಪಷ್ಟನೆ

19/07/2021, 12:52

ಮಂಗಳೂರು(reporterkarnataka news): ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ. ಯಾರೋ ಕಿಡಿಗೇಡಿಗಳು ಆಡಿಯೋ ಸೃಷ್ಟಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹೋಗುವ ಚಿಂತನೆ ನಡೆಸಿದ್ದೇನೆ. ಇದರ ಬಗ್ಗೆ ತನಿಖೆ ನಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋ ವೈರಲ್ ಆಗುತ್ತಿದ್ದಂತೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಯವರಿಗೆ ಈ ಕುರಿತು ಪತ್ರ ಬರೆಯುತ್ತೇನೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಅವರು ಆತ್ಮವಿದ್ದಂತೆ. ಅವರು ನಮ್ಮ ಪಕ್ಷದ ಸರ್ವ ಸಮ್ಮತದ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರು ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ನಳಿನ್ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು