7:25 AM Monday29 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ತರೀಕೆರೆ ಶಾಸಕರ ಅಭಿನಂದನಾ ಸಭೆಯಲ್ಲಿ ಗಲಭೆ: ಚಾಕು ಇರಿತ: ಯುವಕ ಸಾವು, ಇಬ್ಬರಿಗೆ ಗಾಯ

04/06/2023, 09:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಚಾಕು ಇರಿತದಿಂದ ವರುಣ್ (28) ಎಂಬಾತ ಸಾವಿಗೀಡಾಗಿದ್ದಾನೆ.


ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ.
ತರೀಕೆರೆ ಶಾಸಕ ಶ್ರೀನಿವಾಸ್ ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆಯಿತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.
ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಗೆ ಡ್ರ್ಯಾಗರ್ ಹಾಕಲಾಯಿತು.
ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತ ಉಂಟಾಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಕಬಾಬ್ ಮೂರ್ತಿ ಇರಿದಿರುವುದಾಗಿ ಆರೋಪಿಸಲಾಗಿದೆ. ಗಾಯಾಳು ವರುಣ್ ಅವರನ್ನು ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಸಾವನ್ನಪ್ಪಿದ ರು ಎಂದು ತಿಳಿದು ಬಂದಿದೆ.
ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್‌ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು