8:47 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ

04/06/2023, 19:31

ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ರೋಡ್ ಬಳಿಯಿಂದ ಲಾಲ್ ಭಾಗ್ ನಗರಪಾಲಿಕೆಯ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಬಡ ಬೀದಿಬದಿ ವ್ಯಾಪಾರಿಗಳಿಗೆ ಕಾನೂನು ಬದ್ದವಾಗಿ ದೊರಕಿರುವ ಐಡಿ ಕಾರ್ಡ್, ಪ್ರಮಾಣ ಪತ್ರಗಳನ್ನು ವಿತರಿಸದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಬ್ಬಾಳಿಕೆ ನಡೆಸಿ ಅವರ ಕನಿಷ್ಠ ಬದುಕುವ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದಾರೆ. ನಗರಪಾಲಿಕೆಯಲ್ಲಿ 14 ವರ್ಷದ ಹಿಂದೆ ನಿವೃತ್ತಿ ಆಗಿರುವ ಅಧಿಕಾರಿಯನ್ನೇ ಆರೋಗ್ಯ ಅಧಿಕಾರಿಯಾಗಿ ಮುಂದುವರಿಸುತ್ತಿದ್ದಾರೆ, ಆರೋಗ್ಯ ಅಧಿಕಾರಿಗೆ ಕೆಳ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ಪಾಲಿಕೆಯ ಬೀದಿಬದಿ ವ್ಯಾಪಾರದ ಕಾನೂನು, ನಿಯಮಗಳ ಜ್ಞಾನ ಇಲ್ಲ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ಬಡ ಬೀದಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುತ್ತಿದ್ದಾರೆ. ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯಿಸಿ ನಗರ ಪಾಲಿಕೆ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಬೀದಿ ವ್ಯಾಪಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು