6:27 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ 4 ಮಂದಿ ಸ್ಥಳದಲ್ಲೇ ದಾರುಣ ಸಾವು; ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಕಾರು

05/06/2023, 09:12

ವೈಷ್ಣವಿ ರಾಮೇಗೌಡ ಮದ್ದೂರು ಮಂಡ್ಯ

info.reporterkarnataka@gmail.com

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಲಾರಿಯೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಶರತ್, ನವೀನ್, ಹೇಮಂತ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ‌. ನೆಲಮಂಗಲದ ಈ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮುಂದುಗಡೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು