2:11 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆ: ರಾಜ್ಯ ಸರಕಾರ ವಿರುದ್ಧ ಬಿ.ಸಿ. ರೋಡ್ ನಲ್ಲಿ ಬಿಜೆಪಿ ಪ್ರತಿಭಟನೆ

05/06/2023, 21:51

ಬಂಟ್ವಾಳ(reporterkarnataka.com): ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಪ್ರತಿಭಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು.


ಈ ಸಂದರ್ಭ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮೂಲಕ ಅಧಿಕಾರಕ್ಕೆ ಬಂದಿದ್ದು, ಇದು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ. ಇನ್ನು ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷವನ್ನೂ ಗ್ಯಾರಂಟಿ ದಿವಾಳಿ ಮಾಡುವುದರೊಂದಿಗೆ ರಾಜ್ಯವನ್ನು ಪಾಕಿಸ್ತಾನ್, ವೆಜೆಜುವೆಲಾ ಮಾದರಿ ಆರ್ಥಿಕ ದಿವಾಳಿತನಕ್ಕೆ ಕೊಂಡೊಯ್ಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿಗಳು ಅನುಷ್ಠಾನಕ್ಕೇ ಯೋಗ್ಯವಾದುದಲ್ಲ, ವಿದ್ಯುತ್ ಉಚಿತ ಎಂದು ಒಂದೆಡೆ ಹೇಳಿ, ಮತ್ತೊಂದೆಡೆಯಿಂದ ದರ ಏರಿಕೆ ಮಾಡುತ್ತಿದೆ. ನಿರುದ್ಯೋಗಿಗಳ ಭತ್ತೆಗೆ ಈಗ ಕಂಡೀಶನ್ ಹಾಕಲಾಗುತ್ತಿದೆ, ಸರಕಾರ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು, ಅಂದು ಹೇಳಿದ ಮಾತಿಗೆ ವ್ಯತಿರಿಕ್ತವಾಗಿ ಇಂದು ಷರತ್ತುಗಳನ್ನು ಹಾಕಲಾಗುತ್ತಿದೆ. ತಾನು ನೀಡಿದ ಆಶ್ವಾಸನೆಯನ್ನು ಮರೆಮಾಚುವ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಕಮಲಾಕ್ಷಿ ಪೂಜಾರಿ, ರಮಾನಾಥ ರಾಯಿ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುರೇಶ್ ಕೋಟ್ಯಾನ್, ಗಣೇಶ್ ರೈ ಮಾಣಿ, ನಂದರಾಮ ರೈ, ಜಯರಾಮ ನಾಯ್ಕ್ ಕುಂಟ್ರಕಳ, ಪ್ರಕಾಶ್ ಅಂಚನ್, ಕೇಶವ ದೈಪಲ್, ಯಶೋಧರ ಕರ್ಬೆಟ್ಟು, ಧನಂಜಯ ಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ರಾಜಾರಾಮ ನಾಯಕ್, ದಿನೇಶ್ ದಂಬೆದಾರ್, ಹರಿಪ್ರಸಾದ್ ಸಹಿತ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು