3:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ

07/06/2023, 19:42

ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ.
ವಾಯುಭಾರ ಕುಸಿತ: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್ ರೂಮ್- 1077/0824-2442590 ಸಂಪರ್ಕಿಸುವುದು.
ತುರ್ತು ಸೇವೆಗೆ ನಿಯಂತ್ರಣ ಕೊಠಡಿಗಳ ವಿವರ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.
ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು, ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪ ವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಉಪ-ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆದು 24/7 ಕಾಲ ಕಾಯನಿರ್ವಹಿಸುವ ಮೂಲಕ ಪ್ರತಿ ದಿನ ಮಳೆ ಮತ್ತು ಮಳೆಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.
ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು:
ಮಂಗಳೂರು-0824-2220587/596, ಉಳ್ಳಾಲ-0824-2204424, ಬಂಟ್ವಾಳ- 08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು