4:11 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು!

10/06/2023, 11:49

ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ.
ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾರಣ ಮಳೆಗೆ ರಸ್ತೆಯಲ್ಲಿ ತೋಡಿನ ತರಹ ನೀರು ಹರಿಯಲಾರಂಭಿಸಿದೆ. ಇದು ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಲಾಲ್ ಬಾಗ್ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ, ಇಂತಹ ರಮಣೀಯ ದೃಶ್ಯವನ್ನು ನಗರದ 60 ವಾರ್ಡ್ ಗಳ ಬಹುತೇಕ ಗಲ್ಲಿ ಗಲ್ಲಿಗಳಲ್ಲಿಯೂ ಕಂಡು ಕಣ್ಣು ತುಂಬಿಸಿಕೊಳ್ಳಬಹುದು.
ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಚರಂಡಿ ಇದ್ದ ಕಡೆ ಕಟ್ಟಡ ಕಾಮಗಾರಿ, ರಸ್ತೆ ಕಾಂಕ್ರೀಟಿಕರಣ ಮುಂತಾದ ಕಾರಣಗಳಿಂದ ಚರಂಡಿ ಬ್ಲಾಕ್ ಆಗಿರುವುದು, ಇನ್ನೂ ಹಲವು ಕಡೆ ತೋಡು ಸ್ವಚ್ಛತೆ ಸಮರ್ಪಕವಾಗಿ ನಡೆಯದಿರುವುದು ಇಲ್ಲಿನ ಮಳೆಗಾಲದ ಸಮಸ್ಯೆ ಹೊರತು ಬಿರುಸಿನ ಮಳೆ ಬೀಳುವುದು ಕಾರಣವಲ್ಲ. ಇದೀಗ ಮುಂಗಾರುನೊಂದಿಗೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈಋತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಡು ಬಿರುಸುಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು