ಇತ್ತೀಚಿನ ಸುದ್ದಿ
ಕಾವೂರಿನಲ್ಲಿ ಮನೆ ಮೇಲೆ ಮರ ಬಿದ್ದು 3 ಮಂದಿಗೆ ಗಾಯ: ಘಟನಾ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ; ನೆರವು ಘೋಷಣೆ
11/06/2023, 11:39

ಸುರತ್ಕಲ್(reporterkarnataka.com): ವಿಪರೀತ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಯ ಮೇಲೆ ಬೃಹತ್ ಮರ ಉರುಳಿಬಿದ್ದು, ಮನೆ ಮಾಲಕ ಸದಾನಂದ ,ಪತ್ನಿ ರತ್ನ ಹಾಗೂ ಅವರ ಪುತ್ರಿ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಎಲ್ಲ ರೀತಿಯ ನೆರವು ಘೋಷಿಸಿದರು.
ಮನೆ ಸಂಪೂರ್ಣ ಜಖಂಗೊಂಡಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಮನೆಯ ವಸ್ತುಗಳು ಹಾನಿಗೀಡಾಗಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಗಾಯಗೊಂಡವರ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯೆ ಸುಮಂಗಲಾ ರಾವ್, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.