8:41 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ರಾಜಕೀಯ ಪ್ರೇರಿತ ಶಕ್ತಿಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿ ಅನುಕರಣೆ: ಶಾಸಕ ವೇದವ್ಯಾಸ ಕಾಮತ್

19/07/2021, 18:25

ಮಂಗಳೂರು(reporterkarnataka news): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. ನಳಿನ್ ಕುಮಾರ್ ಕಟೀಲ್ ಅವರ ಹಾಗೂ ಬಿಜೆಪಿಯ ಹೆಸರಿಗೆ ಮಸಿ ಬಳಿಯಲು ಇಂತಹ ಕೃತ್ಯಗಳನ್ನು ಮಾಡಿರುವುದು ರಾಜಕೀಯದ ದುರುದ್ಧೇಶದಿಂದ ಕೂಡಿದೆ. ಈ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇನೆ.

ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬಲಗೊಳ್ಳುತ್ತಿರುವುದನ್ನು ಕಂಡು ಸಹಿಸದೆ ರಾಜ್ಯಾಧ್ಯಕ್ಷರ ತೇಜೋವಧೆ ಮಾಡಲು ಪ್ರಯತ್ನಿಸುತಿದ್ದಾರೆ. ಬಿಜೆಪಿಯ ಬೆಳವಣಿಗೆಯನ್ನು ಸಹಿಸದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ವೈರಲ್ ಆಗಿರುವ ಆಡಿಯೋ ಕುರಿತು ಸೂಕ್ತ ತನಿಖೆಯಾಗಬೇಕು. ಹಾಗೂ ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಬೇಕೆಂದು ಗೃಹ ಸಚಿವರಿಗೆ ಒತ್ತಾಯಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು