3:53 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯೊಳಗೆ ಹಗ್ಗಜಗ್ಗಾಟ: ಬಿಎಸ್ ವೈ ಟೀಮಿಗಾಗುತ್ತಾ ಹಿನ್ನಡೆ? ಯತ್ನಾಳ್ ಗೆ ಸಿಗುತ್ತಾ ಚಾನ್ಸ್?

12/06/2023, 14:08

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಸಾಮಾನ್ಯವಾಗಿ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಪ್ರತಿಪಕ್ಷದ ನಾಯಕನ ಆಯ್ಕೆ ನಡೆಯುತ್ತದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿದ್ದ ಏಟಿನಿಂದ ಇನ್ನೂ ಚೇತರಿಸಿಕೊಳ್ಳದ ಬಿಜೆಪಿಯು ಫಲಿತಾಂಶ ಹೊರಬಿದ್ದು ಹೆಚ್ಚುಕಡಿಮೆ ತಿಂಗಳಾಗುತ್ರಾ ಬಂದರೂ ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಸೋತಿದೆ. ಪಕ್ಷದ ನಾಯಕರೊಳಗೆ ಮೂಡದ ಒಮ್ಮತ ಇದಕ್ಕೆ ಕಾರಣವಾಗಿದೆ.
ಬಿಜೆಪಿ ನಾಯಕರು ಎಷ್ಟೇ ಹೇಳಿದರೂ ಪಕ್ಷದೊಳಗೆ ಎರಡು ಬಣಗಳು ಸಕ್ರೀಯವಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೇ ಈ ಎರಡು ಟೀಮ್ ಗಳ ನಾಯಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೆಲವು ಹಿರಿಯ ನಾಯಕರು ಯಡಿಯೂರಪ್ಪ ಬಣದಲ್ಲಿ ಸಕ್ರೀಯರಾಗಿದ್ದಾರೆ. ಹಾಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಸನಗೌಡ ಪಾಟೀಲ್ ಯತ್ನಾಳ್ ಮುಂತಾದವರು ಸಂತೋಷ್ ಬಣದಲ್ಲಿ ಕ್ರಿಯಾಶೀಲರಾಗಿದ್ದಾರೆ.
ಈ ಬಣ ರಾಜಕೀಯವೇ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿಯೂ ವಿಭಿನ್ನ ಅಭಿಪ್ರಾಯಗಳು ಹೊರಬರಲು ಕಾರಣವಾಗಿದೆ.
ಯಡಿಯೂರಪ್ಪ ಅವರು ಅನಿವಾರ್ಯ ಸ್ಥಿತಿಯಲ್ಲಿ ಅಧಿಕಾರದಿಂದ ಕೆಳಗಿಳಿದಾಗ ತನ್ನ ಖಾಸಾ ಶಿಷ್ಯ ಬಸವರಾಜ ಬೊಮ್ಮಾಯಿ ಅವರನ್ನು ನಿರಾಯಸವಾಗಿ ಸಿಎಂ ಕುರ್ಚಿಯಲ್ಲಿ ಕೂರಿಸಿ ನಿರ್ಗಮಿಸಿದ್ದರು. ಈಗಲೂ ಕೂಡ ಯಡಿಯೂರಪ್ಪ ಅವರು ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಪ್ರತಿಪಕ್ಷದ ನಾಯಕನಾಗಿ ಸರಕಾರವನ್ನು ಎಲ್ಲಿ ಕಟ್ಟಿಹಾಕಬೇಕೆನ್ನುವ ಬಗ್ಗೆ ನೈಪುಣ್ಯತೆ ಹೊಂದಿದ್ದಾರೆ ಎಂದು ಯಡಿಯೂರಪ್ಪ ಅವರು ಹೈಕಮಾಂಡಿನ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಸಂತೋಷ್ ಅವರ ಗುಂಪು ಯಡಿಯೂರಪ್ಪ ಅವರ ಅಭ್ಯರ್ಥಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿ ಪ್ರತಿಪಕ್ಷದ ನಾಯಕ ಸ್ಥಾನದಲ್ಲಿ ಕೂರಿಸಲು ತಯಾರಿಲ್ಲ. ಬದಲಿಗೆ ಸಂತೋಷ್ ಅವರು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ. ಯತ್ನಾಳ್ ಅವರು ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದವರು. ಅವರಿಗೂ ಆಡಳಿತಾತ್ಮಕ ಒಳ್ಳೆಯ ಅನುಭವವಿದೆ. ಜವಾಬ್ದಾರಿ ಬಂದಾಗ ಅವರು ವಿವಾದಾತ್ಮಕ ಹೇಳಿಕೆ ಕೊಡಲು ಹೋಗಲಾರರು. ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರು ತೂಕದ ಹೇಳಿಕೆಗಳನ್ನೇ ನೀಡುತ್ತಿದ್ದರು. ಪ್ರತಿಪಕ್ಷದ ನಾಯಕ ಸ್ಥಾನ ದೊರೆತರೆ ಅವರು ಜವಾಬ್ದಾರಿ ಯುತವಾಗಿ ನಡೆದುಕೊಳ್ಳುತ್ತಾರೆ. ಅದಲ್ಲದೆ ಲಿಂಗಾಯತ ಸಮುದಾಯಕ್ಕೆ ಸೇರಿದವರು ಎಂದು ಸಂತೋಷ್ ಅವರು ಬಿಜೆಪಿ ಹೈಕಮಾಂಡಿಗೆ ವರದಿ ಕಳುಹಿಸಿದ್ದಾರೆ ಎನ್ಬಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ
ಕೆಲವು ಹೊಸ ಪ್ರಯೋಗಗಳನ್ನು ಕೂಡ ಸಂತೋಷ್ ಸಮರ್ಥಿಸಿಕೊಂಡಿದ್ದಾರೆ. ಹೊಸ ಪ್ರಯೋಗ
ಬಿಜೆಪಿಗೆ ಅನಿವಾರ್ಯವಾಗಿತ್ತು. ಈ ಪ್ರಯೋಗದಿಂದ 60+ ಸ್ಥಾನಗಳಾದರೂ ಬಿಜೆಪಿಗೆ ಬಂದಿದೆ. ಇಲ್ಲದಿದ್ದರೆ ಅಷ್ಟೂ ಬರುತ್ತಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ
ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಎಲ್ಲ ಲೆಕ್ಕಾಚಾರದ ಪ್ರಕಾರ ಪ್ರತಿಪಕ್ಷದ ನಾಯಕ ಸ್ಥಾನ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಿಗುವ ಸಾಧ್ಯತೆ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು