12:47 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮೆಥಾಂಪೆಟಾಮೈನ್ ಡ್ರಗ್ಸ್ ಮಾರಾಟ: ತಲಪಾಡಿ ಕೆ.ಸಿ.ರೋಡ್ ಮೂಲದ ಇಬ್ಬರು ಆರೋಪಿಗಳ ಬಂಧನ

13/06/2023, 00:18

ಮಂಗಳೂರು(reporterkarnataka.com): ನಿಷೇಧಿತ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ನೆತ್ತಿಲಪದವು ಬಳಿ ಬಂಧಿಸಿದ್ದಾರೆ.
ತಲಪಾಡಿ ಕೆ.ಸಿ. ರೋಡ್ ನಿವಾಸಿಯಾಗಿರುವ ಅಬ್ದುಲ್ ರಶೀದ್ ಮೊಯದ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್ (40) ಬಂಧಿತ ಆರೋಪಿಗಳು. ಇವರು ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.



ನೆತ್ತಿಲಪದವು ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಕೊಣಾಜೆ ಪೊಲೀಸ್ ಠಾಣೆ ಪಿ.ಎಸ್.ಐ ಅಶೋಕ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳಿಂದ 20 ಗ್ರಾಂ ಮೆಥಾಂಪೆಟಾಮೈನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 1,06,500/ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು