ಇತ್ತೀಚಿನ ಸುದ್ದಿ
ಕರಾವಳಿ, ಮಲೆನಾಡು ಜಿಲ್ಲೆ: ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ವರ್ಷಧಾರೆ ನಿರೀಕ್ಷೆ
13/06/2023, 21:42
ಬೆಂಗಳೂರು(reporterkarnataka.com): ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯಕ್ಕೆ ನೈಋತ್ಯ ಮುಂಗಾರು ನಿಗದಿತ ಅವಧಿಗಿಂತ ವಿಳಂಬವಾಗಿ ಪ್ರವೇಶಿಸಿದೆ. ಮುಂದಿನ 4 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಜೂನ್ 13 ಮತ್ತು 14ರಂದು ದಕ್ಷಿಣ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಕೂಡ ತುಂತುರು ಮಳೆಯ ನಿರೀಕ್ಷೆ ಇದೆ ಎಂದಿದೆ.