1:31 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

19/07/2021, 20:48

ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಅವರು ನಗರದ  ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ  ಈಗಾಗಲೇ  ಅನುದಾನ ಬಿಡುಗಡೆಯಾಗಿದೆ.  ಆಯಾ ಅಕಾಡೆಮಿ  ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು