ಇತ್ತೀಚಿನ ಸುದ್ದಿ
ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ
16/06/2023, 13:54
ಮಂಗಳೂರು(reporterkarnataka.com):ಹಳೆ ವಿದ್ಯಾರ್ಥಿ ಸಂಘ ಬೆಸೆಂಟ್ ಸಂಧ್ಯಾ ಕಾಲೇಜು(ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು ಇದರ ಸಹಯೋಗದೊಂದಿಗೆ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಭಾಂಗಣದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಕಾಲೇಜು ಪ್ರಾಂಶುಪಾಲ ಡಾ. ಲಕ್ಷಿನಾರಾಯಣ ಭಟ್, ಸಹ ಉಪನ್ಯಾಸಕ ಗಣಪತಿ ಭಟ್ ಎಂ, ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ.ವಾಸಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಡಾ. ನಿಕಿತಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು. 48 ಯೂನಿಟ್ ರಕ್ತವನ್ನು ಶಿಬಿರಾರ್ಥಿಗಳಿಂದ ಸಂಗ್ರಹಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಖಜಾಂಚಿ ಮೋಹಿತ್ ಶೆಟ್ಟಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷ ಪ್ರದಿಪ್, ವಂದಿಸಿದರು ಹಾಗೂ ಯೋಗೀಶ್ ಶರ್ಮ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.