2:05 AM Thursday24 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಪ್ರಸಿದ್ಧ ಪ್ರವಾಸಿ ತಾಣ, ಯಾತ್ರಾಸ್ಥಳ ಕೋಟೆಬೆಟ್ಟಕ್ಕಿಲ್ಲ ಸರಿಯಾದ ರಸ್ತೆ: ಅಭಿವೃದ್ಧಿ ಪಡಿಸಲು ಶಾಸಕರಿಗೆ ಆಗ್ರಹ

20/07/2021, 07:27

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲೂಕಿನ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಬೆಟ್ಟ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಕೆಟ್ಟು ಹೋಗಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ.ರಸ್ತೆ ಕೆಸರು ಗುಂಡಿಯಿಂದ ತುಂಬಿದ್ದು, ಕೊಚ್ಚೆ ಹೊಂಡಗಳು ಕೊಳೆತು ನಾರುತ್ತಿವೆ. 

ಈ ಗ್ರಾಮದಲ್ಲಿ ಯಾತ್ರಾ ಸ್ಥಳವಾದ ಪ್ರಸಿದ್ಧ  ಕಂಬದ ನರಸಿಂಹಸ್ವಾಮಿ ದೇವಾಲಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಇಲ್ಲಿಗೆ ಆಗಮಿಸುತ್ತಾರೆ. ಆದರೆ ಈ ದಾರಿಯಾಗಿ ತೆರಳುವುದು ಬಲು ದೊಡ್ಡ ಸವಾಲಾಗಿದೆ. ಸ್ಥಳೀಯ ಶಾಸಕರು ತಕ್ಷಣ ಪ್ರವಾಸಿ ತಾಣವಾಗಿರುವ ಕೋಟೆ ಬೆಟ್ಟಕ್ಕೆ ಹೋಗುವ ಮಾರ್ಗದ ರಸ್ತೆಯನ್ನು ದುರಸ್ತಿ ಮಾಡಿಸಬೇಕೆಂದು ಭಕ್ತಾದಿಗಳು ಹಾಗೂ ಅಲ್ಲಿನ ಜನತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು