ಇತ್ತೀಚಿನ ಸುದ್ದಿ
ದ.ಕ. ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ
17/06/2023, 12:17
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ನಿಯುಕ್ತಗೊಂಡಿದ್ದ ಮುಲ್ಲೈ ಮುಹಿಲನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮನ ಜಿಲ್ಲಾಧಿಕಾರಿ ರವಿ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.