1:29 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು