11:38 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ

18/06/2023, 13:05

ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಬೈಕಂಪಾಡಿ ರೈಲ್ವೇ ಟ್ರ್ಯಾಕ್ ಎಂಬಲ್ಲಿ ಚಿನ್ನದ ಸರ ಮತ್ತು ಮೊಬೈಲ್ ಪೋನ್ ಸುಲಿಗೆ ಮಾಡಿದ್ದ ಆರೋಪಿಗಳ ಪೈಕಿ ನಿಹಾಲ್ ನನ್ನು ಬಂಧಿಸಲಾಗಿದೆ.
ಮಂಗಳೂರು ತಾಲೂಕು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ರವರ ನೇತ್ರತ್ವದ ಪೊಲೀಸ್ ತಂಡ ಪತ್ತೆ ಮಾಡಿ ರೂಪಾಯಿ 35,000/- ಮೌಲ್ಯದ ಸುಮಾರು 5,95 ಗ್ರಾಂ ತೂಕದ ಚಿನ್ನದ ಸರ ಹಾಗೂ ರೂಪಾಯಿ 10,000/- ಮೌಲ್ಯದ ಮೊಬೈಲ್ ಪೋನ್ ಸೇರಿದಂತೆ ಒಟ್ಟು 45,000/-ಮೌಲ್ಯದ ಸ್ವತ್ತುಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಯು ಈ ಪ್ರಕರಣದ ದೂರುದಾರರ ಮಗ ಪರಿಚಯದ ವ್ಯಕ್ತಿಯಾಗಿದ್ದು, ದೂರದಾರರ ಮಗನನ್ನು ಬೈಕಂಪಾಡಿ ಹತ್ತಿರದ ರೈಲ್ವೇ ಟ್ರಾಕ್ ಗೆ ಫೋನ್ ಮಾಡಿ ಕರೆಸಿಕೊಂಡು ಆತನ ಸ್ನೇಹಿತ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕನೊಂದಿಗೆ ಸೇರಿ ದೂದುದಾರರನ ಮಗನ ಕಣ್ಣಿಗೆ ಮೆಣಸಿನ ಹುಡಿ ಎರಚಿ ಅವನ ಮೊಬೈಲ್ ಮತ್ತು ಚಿನ್ನದ ಸರವನ್ನು ಸುಲಿಗೆ ನಡೆಸಿರುತ್ತಾನೆ. ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು
ಪೊಲೀಸು ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್, ದಿನೇಶ್ ಕುಮಾರ್ ಬಾರಿಕೆ, ಸಹಾಯಕ ಪೊಲೀಸ್ ಆಯುಕ್ತ
ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪೊಲೀಸ್‌ ಉಪ ನಿರೀಕ್ಷಕ
ಕುಮಾರೇಶನ್, ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು