1:19 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ

18/06/2023, 20:10

ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ.
ಆದರೇ, ಒಕ್ಕೂಟ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ.

ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೂಡಾ, ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜೆಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋದಿ ರಾಜಕಾರಣವನ್ನು ಈ ಕೂಡಲೇ ಕೈ ಬಿಟ್ಟು ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಪಿಐಎಂ ಪಕ್ಷವು ಒಕ್ಕೂಟ ಸರಕಾರ ಹಾಗೂ ಪ್ರಧಾನ ಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ.
ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದ್ದು ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯೆಂಬುದನ್ನು ಒಕ್ಕೂಟ ಸರಕಾರ ಅರಿಯ ಬೇಕು.
ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ದ ನಗ್ಙವಾಗಿ ನಿಂತಿರುವಾಗ ನಮ್ಮ ರಾಜ್ಯ ಬಹುತೇಕರು ಬಿಜೆಪಿ ಎಂಪಿಗಳಿರುವಾಗ ಅವರು ಬಾಯಿ ಹೊಲೆದುಕೊಂಡಿರುವುದು ಅವರ ವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಕಟುವಾಗಿ ಠೀಕಿಸಿದೆ.
ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯಾಗಿದೆ.
ಒಕ್ಕೂಟ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯದಾದ್ಯಂತ ಜೂನ್ 20 ರಂದು ಒಕ್ಕೂಟ ಸರಕಾರದ ಬಡವರ ವಿರೋಧಿ ನೀತಿಯ ಭೂತ ದಹನ ಮಾಡುವ‌ ಮೂಲಕ ತೀವ್ರ ಪ್ರತಿಭಟನಾ ಪ್ರದರ್ಶನ ನಡೆಸಲು ಸಿಪಿಎಂ ರಾಜ್ಯ ಸಮಿತಿ ತನ್ನೆಲ್ಲಾ ಘಟಕಗಳಿಗೆ ಮತ್ತು ರಾಜ್ಯದ ಜನತೆಗೆ ಕರೆ ನೀಡುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು